(ನ್ಯೂಸ್ ಕಡಬ) newskadaba.com ಬಳ್ಳಾರಿ, ಜು. 24. ಕೆಲ ದಿನಗಳಿಂದ ಬಳ್ಳಾರಿಯ ಜಿಲ್ಲಾಧಿಕಾರಿ ಆಯ್ಕೆ ವಿಚಾರವಾಗಿ ಗೊಂದಲ ಉಂಟಾಗಿದ್ದು ಇದೀಗ ನೂತನ ಡಿ.ಸಿ ಆಗಿ ಪ್ರಶಾಂತ್ ಕುಮಾರ್ ಮಿಶ್ರ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಶಾಂತ್ ಕುಮಾರ್ ಮಿಶ್ರ 2014ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು ಈ ಹಿಂದೆ ಕೆಎಸ್‌ಆರ್ಟಿಸಿ ನಿರ್ದೇಶಕರಾಗಿದ್ದರು ಎನ್ನಲಾಗಿದೆ.
ಅವರು ಇಂದಿನಿಂದ ಬಳ್ಳಾರಿ ನೂತನ ಡಿಸಿಯಾಗಿ ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಪವನ್ ಕುಮಾರ್ ಮಾಲಪಾಟಿ ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದರು. ಪವನ್ ಕುಮಾರ್ ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ಸರ್ಕಾರ ವಿಜಯನಗರ ಜಿಲ್ಲೆಯ ಮಾಜಿ ಡಿಸಿ ಟಿ.ವೆಂಕಟೇಶ್ ನೇಮಕ ಮಾಡಿತ್ತು.
