ನಾಳೆ (ಜು. 25) ಸುಳ್ಯ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 24. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜುಲೈ 25ರಂದು (ಮಂಗಳವಾರ) ತಾಲೂಕಿನಾದ್ಯಂತ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.


ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.

ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

Also Read  ಪುತ್ತೂರು: ಅಪ್ರಾಪ್ತ ಬಾಲಕಿಯ ತಬ್ಬಿಹಿಡಿದ ಭೂಪ ಬಾತ್ ರೂಂ ಕಿಟಕಿಗೂ ಕ್ಯಾಮೆರಾ ಇಟ್ಟ...! ➤ ಫೋಕ್ಸೋ ಪ್ರಕರಣ ದಾಖಲು

error: Content is protected !!
Scroll to Top