ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು



(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 25. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್ ನಲ್ಲಿ ಸೋಮವಾರದಂದು ರಾತ್ರಿ ವೇಳೆ ಸಂಭವಿಸಿದೆ.







ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ ನಲ್ಲಿ ತಿರುಗುವ ಸಂದರ್ಭ, ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ.







ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ‌.

error: Content is protected !!
Scroll to Top