ಇಂದು(ಜು. 25) ನಡೆಯಬೇಕಿದ್ದ ವಿವಿ ಪರೀಕ್ಷೆಗಳು ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ದ.ಕ. ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಈ ನಡುವೆ ಇಂದು (ಜು.25) ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

Also Read   ಪ್ರವಾಸಿಗರನ್ನು ಸೆಳೆಯುತ್ತಿದೆ ಮಳೆಗಾಲದಲ್ಲಿ ಮಣಿಪಾಲದ ಅರ್ಬಿ ಜಲಪಾತ

error: Content is protected !!
Scroll to Top