ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐನ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರೀಷಿಯನ್, ಮಷಿನಿಷ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಮೋಟಾರ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅಭ್ಯರ್ಥಿಗಳು ಆ. 25ರೊಳಗೆ ನಗರದ ಬಿಜೈನಲ್ಲಿರುವ ಕರಾರಸಾನಿ, ಮಂಗಳೂರು ವಿಭಾಗದ, ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸಿ, ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ನಿಗಮದ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪೇಜಾವರ ಶ್ರೀ ನಿಧನ: ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ

error: Content is protected !!
Scroll to Top