ವಕೀಲರ ತರಬೇತಿ ಅವಧಿಯ ಶಿಷ್ಯವೇತನದ ಅರ್ಜಿ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿಗೆ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನಕ್ಕಾಗಿ ವೆಬ್‍ಸೈಟ್ www.sw.kar.nic.in ಮೂಲಕ ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಜು. 31ರ ವರೆಗೆ ವಿಸ್ತರಿಸಲಾಗಿದೆ.


ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ಉರ್ವಸ್ಟೋರ್ಸ್‍ ನಲ್ಲಿರುವ ಜಿಲ್ಲಾ ಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಸರ್ಕಾರಿ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಅಹ್ವಾನ

error: Content is protected !!
Scroll to Top