ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಬೆಂಗಳೂರು -ಮೈಸೂರು ಹೈವೇ ಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ. ದ್ವಿಚಕ್ರ ವಾಹನ, ಆಟೋ, ಟ್ರ್ಯಾಕ್ಟರ್ ಸೇರಿ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರತಿ ಗಂಟೆಗೆ 80 ರಿಂದ 100 ಕಿಲೋಮೀಟರ್ ಮಾತ್ರ ಚಲಿಸುವಂತೆ ಆದೇಶ ಹೊರಡಿಸಲಾಗಿದೆ.

Also Read  ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ.!➤ ಇಬ್ಬರು ಮೃತ್ಯು, ಹಲವರಿಗೆ ಗಾಯ

 

 

error: Content is protected !!
Scroll to Top