(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಯ ಜಾರಿಗೆ ತಂದ ನಂತರ ಖಾಸಗಿ ಬಸ್, ಆಟೋ ಹಾಗೂ ಟ್ಯಾಕ್ಸಿ ಮಾಲಕರಿಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಶಕ್ತಿ ಯೋಜನೆ ಸ್ಥಗಿತಗೊಳಿಸುವಂತೆ ಕಾಸಗಿ ನೌಕರರು ಆಗ್ರಹಿಸಿದ್ದಾರೆ.
ಅಲ್ಲದೇ ಜುಲೈ 27ರಂದು ಖಾಸಗಿ ಚಾಲಕ- ಮಾಲಕರ ಮುಷ್ಕರಕ್ಕೆ ಕರೆ ನೀಡಿರುವ ನೌಕರರು, ಖಾಸಗಿ ವಾಹನ ಚಾಲಕರಿಗೆ ಮಾಸಿಕ 10ಸಾವಿರ ರೂ. ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಸರಕಾರಿ ಬಸ್ ಗಳಿಗೆ ಶಕ್ತಿ ಯೋಜನೆ ನೀಡಿದಂತೆ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸಂಘಟನೆಗಳು ಆಗ್ರಹಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇನ್ನು ಮುಂದೆ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಲಾಗುತ್ತದೆ. ಅದರಂತೆ ಇಂದು 3 ಗಂಟೆಗೆ ಖಾಸಗಿ ಸಾರಿಗೆ ಸಂಸ್ಥೆಗಳ ಪದಾಧಿಕಾರಿಗಳ ಜೊತೆ ಮಾತುಕತೆ ನಿಗದಿಯಾಗಿದೆ ಎಂದು ತಿಳಿಸಿದ್ದಾರೆ.