ವಿದ್ಯಾರ್ಥಿನಿಯರಿಂದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ – ಸುಳ್ಳುಸುದ್ದಿ ಹರಡದಂತೆ ಎಸ್ಪಿ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ.


ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ. ಘಟನೆಗೆ ಸಂಬಂಧಿಸಿ ವಿಡಿಯೋಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗವೂ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ನಿಜಾಂಶ ತಿಳಿಯದೇ ಸುಳ್ಳುಸುದ್ದಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.

Also Read  ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!


ಈ ಕುರಿತು ಯಾವುದೇ ದೂರು ನೀಡಲಾಗಿಲ್ಲ. ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ. ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ವಿಚಾರಗಳನ್ನು ಲಿಂಕ್ ಮಾಡಿ ಜನರ ಮನಸ್ಸಿನಲ್ಲಿ ಆತಂಕವನ್ನುಂಟು ಮಾಡುವ ಯಾವುದೇ ಪೋಸ್ಟ್ ಹಾಕಬೇಡಿ. ಏನಾದರೂ ಖಚಿತ ಮಾಹಿತಿ ಸಿಕ್ಕಿದರೆ ಶೇರ್ ಮಾಡುವ ಮೊದಲು ನಮಗೆ ತಿಳಿಸಿ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ವದಂತಿ ಹರಡಬೇಡಿ ಎಂದು ಎಸ್ ಪಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Also Read  ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

error: Content is protected !!
Scroll to Top