ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜು. 27 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.

ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಹಲವು ಯೋಜನೆಗಳ ಅನುಷ್ಟಾನ ಹಾಗೂ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಸಂಬಂಧ ಸರ್ಕಾರ ಮಹತ್ವದ ಚರ್ಚೆ ನಡೆಸಲಿದೆ ಎನ್ನಲಾಗಿದೆ.

Also Read  ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

 

error: Content is protected !!
Scroll to Top