ಕೇರಳದಲ್ಲಿ ಅಜ್ಜ-ಅಜ್ಜಿಯ ಕೊಲೆ- ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಕೇರಳದ ತ್ರಿಶೂರ್ ನಲ್ಲಿ ಅಜ್ಜ- ಅಜ್ಜಿಯ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು, ಚಿನ್ನಾಭರಣ ಮಾರಾಟ ಮಾಡುತ್ತಿದ್ದ ವೇಳೆ ಮಂಗಳೂರಿನಲ್ಲಿ ಬಂಧಿಸಲಾದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ತ್ರಿಶೂರ್ ಜಿಲ್ಲೆಯ ವೈಲತ್ತೂರ್ ನಿವಾಸಿ ಅಹಮ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರ್ ಜಿಲ್ಲೆಯ ವಡೆಕ್ಕೆಕಾಡ್ ಎಂಬಲ್ಲಿ ಜುಲೈ 23ರಂದು ಅಜ್ಜ ಮತ್ತು ಅಜ್ಜಿಯನ್ನು ಕೊಲೆಮಾಡಿ ಅವರಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಮಂಗಳೂರಿಗೆ ಬಂದಿದ್ದ. ಸೋಮವಾರದಂದು ನಗರದ ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಾಸ್ಪದವಾಗಿ ಚಿನ್ನಾಭರಣಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಮುತ್ತಿನ ಸರ, ಸಣ್ಣ ಪದಕವಿರುವ ಚೈನ್, ಮೂರು ಜೊತೆ ಕಿವಿಯೋಲೆ, ಐದು ಉಂಗುರ, ರಡು ಕೈಬಳೆ, ಪಾಸ್ ಪೋರ್ಟ್ ಹಾಗೂ ಇತರೆ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ.

Also Read  ಟಿ20- ಟೆಸ್ಟ್‌ ಗೆ ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್

error: Content is protected !!
Scroll to Top