ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ.







ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.






error: Content is protected !!
Scroll to Top