ಗ್ರಾ.ಪಂ. ಉಪಚುನಾವಣಾ ಫಲಿತಾಂಶ ಪ್ರಕಟ- ಗೆದ್ದುಬೀಗಿದ ಪುತ್ತಿಲ ಪರಿವಾರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 26. ಆರ್ಯಾಪು ಗ್ರಾ.ಪಂ.ನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಭೇರಿಯಾಗಿದ್ದಾರೆ.

ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಕಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು. 23ರಂದು ಉಪ ಚುನಾವಣೆ ನಡೆದಿತ್ತು. ಅದರಲ್ಲಿ ಒಟ್ಟು 1,237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499ಮತ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ ಗೆಣಸಿನಕುಮೇರು 140 ಮತ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಿ. ಪುರುಷೋತ್ತಮ ಪ್ರಭು ಅಬ್ಬುಗದ್ದೆ 353 ಮತ ಪಡೆದುಕೊಂಡಿದ್ದಾರೆ.

Also Read  ವಿಧಾನಪರಿಷತ್ ಚುನಾವಣೆ- ಜಿಲ್ಲೆಯಾದ್ಯಂತ ಮದ್ಯ ನಿಷೇಧ

ಆರ್ಯಾಪು ಗ್ರಾ.ಪಂ.ನ ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್‌ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಒ ನಾಗೇಶ್ ಎಂ.ರವರ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

error: Content is protected !!
Scroll to Top