ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ.


ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Scroll to Top