ಕಲ್ಯಾಣ ಸಂಘಟಿಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಬೆಂಗಳೂರಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಿಂದ 14 ಕಲ್ಯಾಣ ಸಂಘಟಿಕರ ಸಿ ವೃಂದದ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.


ಭೂಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾ ಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ 20 ದಿನದೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-25589459 ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಶರತ್ ಮಡಿವಾಳ ಹಂತಕರ ಸೆರೆ...? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

error: Content is protected !!
Scroll to Top