ಆಗಸ್ಟ್ ನಲ್ಲಿ ಸಿಹಿನೀರು ಮುತ್ತು ಕೃಷಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮೀನುಗಾರಿಕೆ ಇಲಾಖೆ ವತಿಯಿಂದ 2023ರ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.


ಆಸಕ್ತ ಮೀನು ಕೃಷಿಕರು ಹಾಗೂ ಸಾರ್ವಜನಿಕರು ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸುವಂತೆ ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

error: Content is protected !!
Scroll to Top