ಮಂಗಳೂರು ವಿವಿ ನೂತನ ಕುಲಸಚಿವರಾಗಿ ಮುಹಮ್ಮದ್ ನಯೀಮ್ ಮೊಮೀನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಮಂಗಳೂರು ವಿಶ್ವವಿದ್ಯಾನಿಲಯದ 17 ನೇ ಕುಲಸಚಿವರಾಗಿ ಕೆ.ಎ.ಎಸ್ ಅಧಿಕಾರಿ ಮೊಹಮ್ಮದ್ ನಯೀಮ್ ಮೊಮಿನ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಇವರು, ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಏಪ್ರಿಲ್, 2021ರಿಂದ ಕುಲಸಚಿವರಾಗಿದ್ದ ಡಾ. ಕಿಶೋರ್ ಕುಮಾರ್ ಸಿ.ಕೆ ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. ಕುಲಪತಿ ಪ್ರೊ. ಜಯರಾಜ್ ಅಮೀನ್, ಕುಲಸಚಿವ (ಪರೀಕ್ಷಾಂಗ) ಡಾ. ರಾಜು ಕೃಷ್ಣ ಚಲನ್ನವರ್, ಹಣಕಾಸು ಅಧಿಕಾರಿ ಡಾ. ಸಂಗಪ್ಪ ವೈ, ವಿವಿಧ ನಿಕಾಯಗಳ ಡೀನ್ ಗಳು, ವಿಭಾಗ ಮುಖ್ಯಸ್ಥರುಗಳು ನೂತನ ಕುಲಸಚಿವರಿಗೆ ಅಭಿನಂದನೆ ಸಲ್ಲಿಸಿದರು. ‌ ಈ ಮೊದಲು ಕುಲಸಚಿವರಾಗಿದ್ದ ಡಾ. ಕಿಶೋರ್ ಕುಮಾರ್ ಸಿ. ಕೆ ಅವರು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

Also Read  ಟೆರೇಸ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

error: Content is protected !!
Scroll to Top