ಚಿನ್ನದ ಸರದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯ ಬಂಧನ ► ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ.30. ಚಿನ್ನದ ಸರವನ್ನು ದರೋಡೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಬರುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಆರೋಪಿಗಳಿದ್ದ ಬೈಕನ್ನು ತಡೆದ ಸಂದರ್ಭದಲ್ಲಿ ಆರೋಪಿಗಳಲ್ಲೋರ್ವ ಪೊಲೀಸ್ ಸಿಬ್ಬಂದಿ ಜಾವೇದ್ ಎಂಬವರಿಗೆ ಹಲ್ಲೆ ನಡೆಸಿದ ಪರಿಣಾಮ ಜಾವೇದ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ‌. ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

error: Content is protected !!
Scroll to Top