ಗೃಹಲಕ್ಷ್ಮೀ ಯೋಜನೆಗೆ SMS ಅಗತ್ಯವಿಲ್ಲ- ನೇರ ನೋಂದಣಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 25. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಫಲಾನುಭವಿಗಳು ಇನ್ನೂ ಮುಂದೆ SMSಗೆ ಕಾಯದೇ ನೇರವಾಗಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬಹುದಾಗಿದೆ.

ಇನ್ನು ಮುಂದೆ ಫಲಾನುಭವಿಗಳ ಮೊಬೈಲ್‌ಗೆ ಯಾವುದೇ ಎಸ್‌ಎಂಎಸ್‌ಗಳನ್ನು ಕಳುಹಿಸುವುದಿಲ್ಲ. ಅವರು ತಮ್ಮ ಹತ್ತಿರದ ಗ್ರಾಮ ಒನ್, ಗ್ರಾಮ ಪಂಚಾಯತ್‌ನ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ನಗರದ ವಾರ್ಡ್ ಕಚೇರಿ ಹೀಗೆ ಯಾವುದಾದರು ಒಂದು ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ

error: Content is protected !!
Scroll to Top