ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಜಿಟಿ ಜಿಟಿ ಮಳೆ ನಡುವೆ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಐದು ವಾಹನಗಳು ಜಖಂಗೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್​​ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿಯ ಸಿಗ್ನಲ್​​​ ನಲ್ಲಿ ವಾಹನಗಳು ನಿಂತಿದ್ದ ವೇಳೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ.

ನಂತರ ಮೂರು ಕಾರು ಒಂದು ಆಟೋ‌ ಕೂಡಾ ಬಂದು ಗುದ್ದಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಸರಣಿ ಅಪಘಾತ ನಡೆದಿದೆ ಎನ್ನಲಾಗಿದೆ. ಆಟೋ ಚಾಲಕ ದೇವೆಂದ್ರಪ್ಪ ಎಂಬುವವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!

Join the Group

Join WhatsApp Group