ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್ – ಸಮೀಕ್ಷೆಗೆ ಮುಂದಾದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 26. ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ  ರಾಜ್ಯ ಸರಕಾರ ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಬಿಪಿಎಲ್ ಕುಟುಂಬದ ಮನೆ ಒಡೆಯ ಮೃತಪಟ್ಟ ಪ್ರಕರಣಗಳಲ್ಲಿ ಕುಟುಂಬದ ಉಳಿದ ಸದಸ್ಯರಿಗೆ ಪಡಿತರ ಸಿಗದ ಹಿನ್ನಲೆ ಸಮಸ್ಯೆ ನಿವಾರಿಸುವ ಸಲುವಾಗಿ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಇಂತಹ ಪ್ರಕರಣಗಳಿಗೆ ಸಂಬಂಧಿಸಿ ಕಾರ್ಡ್ ದುರ್ಬಳಕೆ ಆಗುತ್ತಿರುವ ಬಗ್ಗೆ ಈಗಾಗಲೇ ದೂರುಗಳು ಬಂದಿದ್ದು, ಸಮೀಕ್ಷೆಯಿಂದ ತಹ ದುರ್ಬಳಕೆಗೆ ಕಡಿವಾಣ ಬೀಳಲಿದೆ. ಕೆಲ ಬಿಪಿಎಲ್ ಕುಟುಂಬಗಳ ಮನೆಯೊಡೆಯರು ಮೃತಪಟ್ಟು ವರ್ಷಗಳೇ ಕಳೆದಿದ್ದರೂ, ಅವರ ಹೆಸರು ಇನ್ನೂ ಕಾರ್ಡ್ ಗಳಲ್ಲಿ ಉಳಿದುಕೊಂಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮೀಕ್ಷೆ ನಡೆಸುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಸಮೀಕ್ಷೆ ನಡೆಸಲಾಗುವುದು ಎಂದರು.

Also Read  ಗಾಂಧಿ ಜಯಂತಿ: ಕಡಬ ಪಟ್ಟಣ ಸ್ವಚ್ಚತಾ ಕಾರ್ಯಕ್ರಮ

error: Content is protected !!
Scroll to Top