ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 26. ನಗರದ ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಕಾಲೇಜು ನಿರ್ದೇಶಕಿ, ಮೂವರು ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದು, ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿಯ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಪ್ರೇರಿತವಾಗಿ ದೂರು ನೀಡಬೇಕು, ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಗ್ರ ತನಿಖೆಗೆ ಆಗ್ರಹ ವ್ಯಕ್ತವಾದ ಹಿನ್ನೆಲೆ, ಇದೀಗ ಮಲ್ಪೆ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಿಸಲಾಗಿದೆ.

Also Read  ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು      

ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ ತನಿಖೆ ನಡೆಸಲಾಗುವುದು. ಇದು ಅತೀ ಸೂಕ್ಷ್ಮ ವಿಚಾರವಾಗಿದ್ದು, ಹೆಣ್ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್‌ ಹೇಳಿದ್ದಾರೆ.

error: Content is protected !!
Scroll to Top