ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯನ್ನು ಸಮರ್ಥಿಸಿದ ಆರೋಪ ► ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.31. ಅಮಾಯಕ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಬಶೀರ್ ಹತ್ಯೆಯನ್ನು ಸಮರ್ಥಿಸಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂದರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಅನಂತ ಮುರ್ಡೇಶ್ವರ ಅವರು ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 153 (ಎ), 116 ಸೆಕ್ಷನ್ಗಳಡಿಯಲ್ಲಿ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜನವರಿ 28ರಂದು ನಗರದ ಖಾಸಗಿ ಸಭಾಂಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆ ಮಾಡಬಾರದಾ?’ ಎಂದು ಪ್ರಶ್ನಿಸುವ ಮೂಲಕ ಕೊಲೆಗಡುಕರಿಗೆ ಬೆಂಬಲ ಸೂಚಿಸಿದ್ದರಲ್ಲದೆ ವಿಎಚ್ಪಿ ಜಿಲ್ಲಾಧ್ಯಕ್ಷನಾಗಿ ತಾನು ಬಶೀರ್ ಹತ್ಯೆಯನ್ನು ಸಮರ್ಥಿಸುವುದಾಗಿ ಹೇಳಿದರು. ನನ್ನ ಈ ಹೇಳಿಕೆ ವಿರುದ್ಧ ಪ್ರಕರಣ ದಾಖಲಾದರೂ ನಾನು ಅದನ್ನು ಎದುರಿಸಲು ಸಿದ್ಧ ಎಂದು ಜಗದೀಶ್ ಶೇಣವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಸವಾಲು ಹಾಕಿದ್ದರು.

Also Read  ಮಂಗಳೂರು: ಸರಕಾರಿ ವಾಹನ ಚಾಲಕರ ಸಂಘದ ಸಭೆ

error: Content is protected !!
Scroll to Top