ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ – ಐವರು ಐಎಎಸ್, 25ಕೆಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ರಾಜ್ಯ ಸರ್ಕಾರದಿಂದ ಆಡಳಿತ ಕೇಂದ್ರಕ್ಕೆ ಚುರುಕು ಮುಟ್ಟಿಸೋ ಕುರಿತಾಗಿ, ಐವರು ಐಎಎಸ್ ಹಾಗೂ 25 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಡಾ.ಎಂ.ವಿ. ವೆಂಕಟೇಶ್, ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಗಂಗೂಭಾಯಿ ರಮೇಶ್ ಮಾನಕರ್, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರಾಗಿ ಜಿ.ಎಂ ಗಂಗಾಧರ ಸ್ವಾಮಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೆಶಕರನ್ನಾಗಿ ಕೆ.ನಾಗೇಂದ್ರ ಪ್ರಸಾದ್ ಹಾಗೂ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆಯಾಗಿ ಬಿ.ವಿ ಅಶ್ವಿಜಾ ಅವರನ್ನು ವರ್ಗಾವಣೆ ಮಾಡಿದೆ ಎನ್ನಲಾಗಿದೆ.

Also Read  ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ

error: Content is protected !!
Scroll to Top