ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ 2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರರಿಗೆ 1ಲಕ್ಷ ರೂ. ಆದಾಯ ಮೀರಿರಬಾರದು. ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://shp.karnataka.gov.in ಮೂಲಕ ಆ.16ರೊಳಗೆ ಅರ್ಜಿ ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ಸಂಪರ್ಕಿಸಬಹುದು.

Also Read  ಕಡಬ: ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಹಿಳೆ ಮೃತ್ಯು

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top