ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ – News Kadaba

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ತೋಟಗಾರಿಕೆ ಬೆಳೆಯನ್ನು ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಅದರ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ.

ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಈ ಯೋಜನೆಯಡಿ ನೋಂದಾಯಿಸಬಹುದು. ಸಾರ್ವಜನಿಕ ಸೇವಾ ಕೇಂದ್ರದ ಮೂಲಕವೂ ನೋಂದಾಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ 6,400 ರೂ. ಹಾಗೂ 2,350 ರೂ.ಗಳಾಗಿದ್ದು ಜು. 31ರೊಳಗೆ ನೋಂದಾಯಿಸಬಹುದು ಎಂದು ತೋಟಾಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top