ವಂದೇ ಭಾರತ್​ ರೈಲಿ​ಗೆ ಕಲ್ಲೆಸೆದ ಕಿಡಿಗೇಡಿಗಳು – ಕಿಟಕಿ ಗಾಜುಗಳಿಗೆ ಹಾನಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು.27. ಆಗ್ರಾ ರೈಲ್ವೇ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವಂದೇ ಭಾರತ್‌ ಎಕ್ಸ್ ಪ್ರೆಸ್‌ ರೈಲಿ​ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ರೈಲು ಕೋಚ್‌ನ ಗಾಜುಗಳು ಒಡೆದಿದ್ದು, ರೈಲ್ವೇ ಮೂಲಗಳು ನೀಡಿದ ಮಾಹಿತಿ ಪ್ರಕಾರ, ಆಗ್ರಾದ ಮಾನಿಯಾ ಮತ್ತು ಜಜೌ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದಾಗ ಕಲ್ಲು ತೂರಲಾಗಿದೆ. ಸಿ-7 ಕೋಚ್‌ನ ಸೀಟ್ ಸಂಖ್ಯೆ 13-14ರ ಕಿಟಕಿ ಗಾಜುಗಳು ಒಡೆದಿವೆ. ರೈಲ್ವೇ ಸಿಬ್ಬಂದಿಯ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಘಟನೆಯ ತನಿಖೆ ನಡೆಯುತ್ತಿದೆ ಎಂದು ಆಗ್ರಾ ರೈಲ್ವೆ ವಿಭಾಗದ ಪಿಆರ್‌ಒ ಶ್ರೀವಾಸ್ತವ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.

Also Read  ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರು ದಲಿತರ ಬಗ್ಗೆ ಕಾಳಜಿ ವಹಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ►ರಾಜು ಹೊಸ್ಮಠ

ಈ ರೀತಿ ಕಲ್ಲು ತೂರಾಟ ನಡೆಯುತ್ತಿರುವುದು ಇದೇ ಮೊದಲಲ್ಲ. ಭೋಪಾಲ್‌ ನಿಂದ ನಿಜಾಮುದ್ದೀನ್ ನಿಲ್ದಾಣದ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೂ ಕೂಡ ಕಲ್ಲು ತೂರಿದ ಘಟನೆ ನಡೆದಿತ್ತು.

 

error: Content is protected !!
Scroll to Top