ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ಪೋಷಕರು ಮತ್ತು ತಿಮರೋಡಿ ನೇತೃತ್ವದಲ್ಲಿ ಸಿಎಂಗೆ ಮನವಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ಹೆತ್ತವರು ಸಿಎಂ ಬಳಿ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿದ್ದು, ಸೌಜನ್ಯ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಂತೋಷ್ ರಾವ್ ನಿರ್ದೋಷಿ ಎಂದು ಇತ್ತೀಚೆಗೆ ಕೋರ್ಟ್ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಮತ್ತೇ 11 ವರ್ಷ ಹಳೆಯ ಪ್ರಕರಣ ಮುನ್ನೆಲೆಗೆ ಬಂದಿತ್ತು. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸೌಜನ್ಯ ಪರ ಹೋರಾಟ ಮತ್ತೆ ತೀವ್ರಗೊಂಡಿದೆ ಎಂದು ವರದಿಯಾಗಿದೆ.

Also Read  ಗ್ರಾಮ ಪಂಚಾಯತ್ ಉಪಚುನಾವಣೆ

error: Content is protected !!
Scroll to Top