(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 27. ರೈಲ್ವೆ ಇಲಾಖೆಯು ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಮೂಲಕ ನಿರುದ್ಯೋಗಿಗಳಿಗೆ ಅವಕಾಶವನ್ನು ನೀಡುತ್ತಿದೆ. ದೇಶದಲ್ಲಿ ಇತ್ತೀಚಿಗೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದ್ದು, ಲಕ್ಷಾಂತರ ವಿದ್ಯಾವಂತರು ಉದ್ಯೋಗ ಇಲ್ಲದೇ ಈಗಲೂ ಕೂಡ ಖಾಲಿ ಕೂತಿದ್ದಾರೆ.
SSLC ಮತ್ತು PUC ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ
ಇದೀಗ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ನೀವು ಎಸ್ ಎಸ್ ಎಲ್ ಸಿ, ಪಿಯುಸಿ ಪೂರ್ಣಗೊಳಿಸಿದ್ದು ಉದ್ಯೋಗ ಹುಡುಕುತ್ತಿದ್ದರೆ ಇದೀಗ ನೀವು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ರೈಲ್ವೆ ನೇಮಕಾತಿ ಹುದ್ದೆಯ ವಿವರ
ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ 7,784 ಟ್ರಾವೆಲಿಂಗ್ ಟಿಕೆಟ್ ಪರೀಕ್ಷಕ (TTE) ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಿದೆ. ರೈಲ್ವೆ ಇಲಾಖೆಯ ಹುದ್ದೆಯಲ್ಲಿ ಆಸಕ್ತಿ ಹೊಂದಿದವರು ಅಧಿಕೃತ ವೆಬ್ ಸೈಟ್ indianrailways.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಕೊನೆಯ ದಿನದ 30 ದಿನಗಳ ಒಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 10 ಅಥವಾ 12 ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 18 ರಿಂದ 30 ವರ್ಷ ವಯೋಮಿತಿಗೆ ನಿಗದಿ ಪಡಿಸಲಾಗಿದೆ. ಇನ್ನು ಹುದ್ದೆಗೆ ಆಯ್ಕೆ ಆದವರಿಗೆ 5,200 ರಿಂದ 20,200 ರೂ. ವೇತನ ನೀಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಎರಡನೇ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ವೈದ್ಯಕೀಯ ಫಿಟ್ ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣದ ನಂತರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಇನ್ನು ಸಾಮಾನ್ಯ ವರ್ಗದವರಿಗೆ 500 ರೂ. ಹಾಗೂ ಹಿಂದುಳಿದ ವರ್ಗದವರಿಗೆ 250 ರೂ. ಅರ್ಜಿ ಶುಲ್ಕ ವಿಧಿಸಲಾಗುತ್ತದೆ.