ಕಡಬದ ಶ್ರೇಯಾ ಸಿ.ಪಿ ಗೆ ರಾಜ್ಯಮಟ್ಟದ ಜನಸ್ಪಂದನಾ ಕಲಾಸಿರಿ ರತ್ನ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಕಡಬ, ಜು.27. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ರಾಜ್ಯಮಟ್ಟದ ಪ್ರತಿಷ್ಠಿತ ಕರ್ನಾಟಕ ಜನಸ್ಪಂದನ ಕಲಾಸಿರಿ ರತ್ನ ಪ್ರಶಸ್ತಿಗೆ ಕಡಬದ ಶ್ರೇಯಾ ಸಿ. ಪಿ ಯವರು ಭಾಜರಾಗಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ 6ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಟ್ರಸ್ಟಿನ ವತಿಯಿಂದ ಬೆಂಗಳೂರಿನ ಬಾಗಲಗುಂಟೆಯಲ್ಲಿ ಜು.23 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಕಡಬದ ವಿದ್ಯಾನಗರದ ದಿ. ಚಿದಾನಂದ ಪೂಜಾರಿ ಹಾಗೂ ಪ್ರೇಮಾ ದಂಪತಿಗಳ ಪುತ್ರಿಯಾದ ಶ್ರೇಯಾ ಸಿ. ಪಿ ಯವರು ಪದವಿ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪಡೆಯುತ್ತಿದ್ದಾರೆ.

Also Read  ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ

ಕರ್ನಾಟಕ ಜನಸ್ಪಂದನಾ ಟ್ರಸ್ಟ್ ಇದರ ಸಂಸ್ಥಾಪಕ, ರಾಜ್ಯಾಧ್ಯಕ್ಷರಾದ ಹನುಮಂತ ಎಸ್ ಮೇಡೆಗಾರರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮ.ಘ.ಚ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಮುನಿರಾಜುರವರು ಸೇರಿದಂತೆ ಹಲವಾರು ಗಣ್ಯ ಅತಿಥಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

error: Content is protected !!
Scroll to Top