ಮೆಟ್ರೋದಲ್ಲಿ ಪ್ರೇಮಿಗಳ ರೊಮ್ಯಾನ್ಸ್- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ದೆಹಲಿ, ಜು. 27.  ಕಳೆದ ಕೆಲವು ತಿಂಗಳುಗಳಿಂದ ದೆಹಲಿ ಮೆಟ್ರೋಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗುತ್ತಿವೆ. ಕೆಲ ಪ್ರೇಮಿಗಳು ಮೆಟ್ರೋದಲ್ಲಿ ಅಸಭ್ಯವಾಗಿ ವರ್ತಿಸುತ್ತಾರೆ. ಇತ್ತೀಚೆಗೆ ಪ್ರೇಮಿಗಳ ಮೈಮರೆತು ರೊಮ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಈ ಕೃತ್ಯ ದೆಹಲಿ ಮೆಟ್ರೋಗೆ ಮತ್ತೊಮ್ಮೆ ಕಳಂಕ ತಂದಿದೆ.

ವೀಡಿಯೋದಲ್ಲಿ ದಂಪತಿಗಳು ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವುದನ್ನು ಕಾಣಬಹುದು. ಇದೇ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಮೆಟ್ರೋದಲ್ಲಿ ಸಹ ಪ್ರಯಾಣಿಕರಿದ್ದರೂ ಸಹ ಅವರನ್ನು ಲೆಕ್ಕಿಸದೇ ದಂಪತಿಗಳು ಪ್ರಣಯದಲ್ಲಿ ತೊಡಗಿದ್ದರು. ಆದರೆ ಸಹ ಪ್ರಯಾಣಿಕರು ಈ ಅಸಭ್ಯ ಕೃತ್ಯಗಳನ್ನು ನೋಡಲಾಗದೇ ಆ ಸ್ಥಳದಿಂದ ಬೇರೆಡೆ ಹೋಗಿದ್ದಾರೆ ಎಂದು ವರದಿಯಾಗಿದೆ.

Also Read  ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ

ಅಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದವರು ಡಿಎಂಆರ್‌ಸಿಯನ್ನು ಟ್ಯಾಗ್ ಮಾಡಿದ್ದರಿಂದ ಅಧಿಕಾರಿಗಳು ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಮೆಟ್ರೋದಲ್ಲಿ ರೋಮ್ಯಾನ್ಸ್ ಮಾಡುವಂತಹ ಅಸಭ್ಯ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಇನ್ನು ಮುಂದೆ ದೆಹಲಿ ಮೆಟ್ರೋಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವುದಾಗಿ ವರದಿಯಾಗಿದೆ.

error: Content is protected !!
Scroll to Top