ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿವಾಹಿತ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.


ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

Scroll to Top