ಚಾಕು ತೋರಿಸಿ ಸುಲಿಗೆ ಪ್ರಕರಣ – 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಸುಲಿಗೆ ಪ್ರಕರಣಕ್ಕೆ ಸಂಬಂದಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಉಳ್ಳಾಲ ನಿವಾಸಿ ಆರೋಪಿ ಬಶೀರ್ ಎಂದು ಗುರುತಿಸಲಾಗಿದೆ. 2000ರಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಸುಲಿಗೆ ಮಾಡಿ ಪರಾರಿಯಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಹುಸೇನ್ @ ಮೊಹಮ್ಮದ್ ಹುಸೇನ್ ಬಶೀರ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರುಗಳಿದ್ದು ಹುಸೇನ್ @ ಮೊಹಮ್ಮದ್ ಹುಸೇನ್ ಮತ್ತು ಮೊಯ್ದೀನ್ ಕುದ್ರೋಳಿ ಎಂಬವರನ್ನು ದಸ್ತಗಿರಿ ಮಾಡಲಾಗಿತ್ತು. ಆದರೆ ಆರೋಪಿ ಬಶೀರ್ ಎಂಬಾತ ತಲೆ ಮರೆಸಿಕೊಂಡಿದ್ದು, ಈತನ ವಿರುದ್ದ ನ್ಯಾಯಾಲಯವು ಉದ್ಘೋಷಣೆಯನ್ನು ಹೊರಡಿಸಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.

Also Read  ಈ ರಾಶಿಯವರನ್ನು ನೀವು ಮದುವೆಯಾದರೆ ನಿಮ್ಮ ಜೀವನದಲ್ಲಿ ಯಾವುದೇ ಕಾರಣಕ್ಕೂ ಸಮಸ್ಯೆ ಬರುವುದಿಲ್ಲ

 

 

error: Content is protected !!
Scroll to Top