ಹೊಸ ಕಾನೂನು ಜಾರಿ; ಲಿಂಗ ಬದಲಾಯಿಸುವಂತಿಲ್ಲ – ರಷ್ಯಾ ಆರೋಗ್ಯ ಸಚಿವಾಲಯ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ರಷ್ಯಾ, ಜು.27. ಲಿಂಗ ಪರಿವರ್ತನೆಗೆ ಶಸ್ತಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಲಿಂಗ ಪರಿವರ್ತನೆಗೆ ಸಂಬಂಧಿಸಿದಂತೆ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ.

ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಬಗೆಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಹಾಗೇಯೇ ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಅನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

Also Read  ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಘೋಷಿಸಲ್ಪಟ್ಟ ಮಗು ಸ್ಮಶಾನದಲ್ಲಿ ಜೀವಂತ

error: Content is protected !!
Scroll to Top