ಅನುಮತಿ ಇಲ್ಲದೇ ಡಿಜೆ; ವಿಜಯೋತ್ಸವ – ಪುತ್ತಿಲ ಪರಿವಾರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅನುಮತಿ ಇಲ್ಲದೆ ವಿಜಯೋತ್ಸವ ಮತ್ತು ಡಿಜೆ ಸೌಂಡ್ ಬಳಕೆ ಮಾಡಿದಕ್ಕಾಗಿ ಪುತ್ತಿಲ ಪರಿವಾರ ಸಂಘಟಣೆ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸೌಧದಿಂದ ಮುಕ್ರಂಪಾಡಿ ತನಕ ಅನುಮತಿ ಇಲ್ಲದೇ ಪುತ್ತಿಲ ಪರಿವಾರ ನಡೆಸಿದ ವಿಜಯೋತ್ಸವದಲ್ಲಿ ಡಿ.ಜೆ ಸೌಂಡ್ ಬಳಕೆ ಮಾಡಿದ ವಿಚಾರಕ್ಕೆ ಸಂಬಂಧಿಸಿ, ಪುತ್ತಿಲ ಪರಿವಾರ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ದ್ವಿಚಕ್ರ ವಾಹನ-ಲಾರಿ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top