ರೈಲು ಹಳಿಯ ಮೇಲೆ ಕುಸಿದು ಬಿದ್ದ ಮಣ್ಣು – 2 ದಿನಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ)newskadaba.com ಬೆಳಗಾವಿ, ಜು.27. ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ದೂಧ್ ಸಾಗರ್ ಫಾಲ್ಸ್ ಬಳಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತಗೊಂಡು ರೈಲು ಹಳಿಯ ಮೇಲೆ ಬಿದ್ದಿರುವ ಪರಿಣಾಮ ರೈಲು ಸಂಚಾರದಲ್ಲಿ ಎರಡು ದಿನಗಳ ಕಾಲ ವ್ಯತ್ಯಯವಾಗಲಿದೆ.


ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಗೋವಾ-ಕರ್ನಾಟಕ ಮಾರ್ಗ ಮಧ್ಯೆ ರೈಲ್ವೆ ಸಂಚಾರ ಸ್ಥಗಿತವಾಗಿತ್ತು. ಕಾರ್ಯಾಚರಣೆ ನಡೆಸಿ ರೈಲ್ವೆ ಹಳಿ ಮೇಲೆ ಬಿದ್ದಿರುವ ಕಲ್ಲು ಹಾಗೂ ಮರಗಳನ್ನು ಕಾರ್ಯಾಚರಣೆ ನಡೆಯುತ್ತಿರುವುದರಿಂದ ದೂಧ್ ಸಾಗರ್ ಬಳಿ ರೈಲ್ವೆ ಸಿಬ್ಬಂದಿ ಹೊರತುಪಡಿಸಿ ಅನ್ಯ ವ್ಯಕ್ತಿಗಳಿಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ. ನೈರುತ್ಯ ರೈಲ್ವೆ ವಲಯದ 150 ಕ್ಕೂ ಅಧಿಕ ಸಿಬ್ಬಂದಿಯಿಂದ 10ಕ್ಕೂ ಹೆಚ್ಚು ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

error: Content is protected !!

Join the Group

Join WhatsApp Group