ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ – ಎಬಿವಿಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಉಡುಪಿ, ಜು. 27. ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.

ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎನ್ನುವ ಆಗ್ರಹ ಪ್ರತಿಭಟನಕಾರರಿಂದ ಕೇಳಿಬಂದಿದೆ. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಬಳಿಕ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು.

Also Read  ರಾಜ್ಯದಲ್ಲಿ ಬಿಎಫ್.7 ಸೋಂಕಿತರಿಗೆ ಉಚಿತ ಚಿಕಿತ್ಸೆ ➤ ಕಂದಾಯ ಸಚಿವ ಆರ್.ಅಶೋಕ್

error: Content is protected !!
Scroll to Top