(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ.
ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ಸಹಕಾರದಿಂದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.