ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.28. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಸಹ ಭಾಗವಹಿಸಲಿದ್ದಾರೆ. ಎಲ್ಲ ಸಚಿವರ ಜತೆಗೆ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರ ಸಭೆ ಜೂನ್‌ ತಿಂಗಳಲ್ಲಿ ನಿಗದಿಯಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಈ ಸಭೆ ರದ್ದಾಗಿತ್ತು ಎಂದು ತಿಳಿದುಬಂದಿದೆ.

Also Read  ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

error: Content is protected !!
Scroll to Top