(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.28. ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ.
ಘಟನೆಯಲ್ಲಿ ಚಾಲಕ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದ್ದು, ಎದುರಿನ ಲಾರಿಗೆ ಸೈಡ್ ಕೊಡುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.