ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ► ಮರಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.31. ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಪ್ರತ್ಯೇಕ ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ನಡೆಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಗಣಿ ಇಲಾಖಾ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ ೧ ಲಾರಿಯನ್ನು ವಶಪಡಿಸಿಕೊಂಡ ಘಟನೆ ಬುಧವಾರದಂದು ನಡೆದಿದೆ.

ಬಂಟ್ವಾಳ ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಜಿಲ್ಲಾ ಎಸ್ಪಿ ರವಿಕಾಂತೇ ಗೌಡ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ಅವರ ನೇತೃತ್ವದ ತಂಡ ಬುಧವಾರದಂದು ದಾಳಿ ನಡೆಸಿದೆ.‌ ದಾಳಿಯ ವೇಳೆ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದು, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ ಒಂದು ಲಾರಿ ಸೇರಿ ಲಕ್ಷಾಂತರ ರೂ‌. ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೋಪಿಗಳ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.

Also Read  ಸುಳ್ಯದ ಹಿರಿಯ ಪತ್ರಕರ್ತ ವಿಧಿವಶ

error: Content is protected !!
Scroll to Top