(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000ರೂ ಅನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಹಿಸಲಿದೆ ಎಂದು ವರದಿ ತಿಳಿಸಿದೆ. ಯೋಜನೆಯ ಉದ್ಘಾಟನೆಯನ್ನು ಆಗಸ್ಟ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ರಾಜ್ಯದ ಯಜಮಾನಿ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಜುಲೈ.20ರಂದು ಚಾಲನೆ ನೀಡಿದ್ದರು. ಆ ಬಳಿಕ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಕೂಡ ಆರಂಭಗೊಂಡಿತ್ತು. ಈಗಾಗಲೇ 70 ಲಕ್ಷಕ್ಕೂ ಅಧಿಕ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ನೋಂದಾಯಿಸಿಕೊಳ್ಳುತ್ತಿದ್ದಾರೆ.
ಈ ನಡುವೆ ಗೃಹಲಕ್ಷ್ಮಿ ಯೋಜನೆಯ ಹಣ ಯಜಮಾನಿ ಮಹಿಳೆಯರ ಖಾತೆಗೆ ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ಅನೇಕ ಮಹಿಳೆಯರು ಕೇಳುತ್ತಿದ್ದರು. ಹಲವರನ್ನು ವಿಚಾರಿಸುತ್ತಿದ್ದರು. ಅವರಿಗೆ ಸಿಎಂ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಆಗಸ್ಟ್ 17ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಯಜಮಾನಿ ಮಹಿಳೆಯರ ಖಾತೆಗೆ 2000ರೂ ಹಣ ಜಮಾ ಗೆ ಉದ್ಘಾಟನೆಯನ್ನು ಮಾಡಲಿದ್ದಾರೆ.