ಮನಪಾ ವ್ಯಾಪ್ತಿಯ ರಸ್ತೆ ಬದಿಯಲ್ಲಿನ ಅನಧಿಕೃತ ಅಂಗಡಿಗಳ ತೆರವಿಗೆ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ಅನಧಿಕೃತ ಅಂಗಡಿಗಳ ತೆರವಿಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಲಿದೆ.


ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್‍ ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರು ಅನಧಿಕೃತವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರೆ ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು ಹಾಗೂ ವಾಹನ ಸವಾರರಿಗೆ ರಸ್ತೆತಡೆ ಉಂಟಾಗಿ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ.

ಹೀಗಾಗಿ ಟೈಗರ್ ಕಾರ್ಯಾಚರಣೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಬೀದಿ- ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪುತ್ತೂರು: 156 ವರ್ಷದ ಪ್ರಾಚೀನ ಕಟ್ಟಡ ನೆಲಸಮ ➤ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

error: Content is protected !!
Scroll to Top