(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಬಾಂಬ್ ಸ್ಫೋಟಿಸಿ ಜನರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಶಂಕಿತ ಉಗ್ರರಿಗೆ ಕೆಲ ವಿದೇಶಿಯರು ₹ 15 ಲಕ್ಷ ನೀಡಿರುವ ಮಾಹಿತಿಯನ್ನು ಸಿಸಿಬಿ ಪೊಲೀಸರು ಪುರಾವೆ ಸಮೇತ ಪತ್ತೆ ಮಾಡಿದ್ದಾರೆ.
ದುಬೈ ಹಾಗೂ ಇತರೆ ದೇಶಗಳಲ್ಲಿರುವ ವಿದೇಶಿಯರು, ಪ್ರಕರಣದ ಪ್ರಮುಖ ಆರೋಪಿ ಜುನೇದ್ ಅಹಮ್ಮದ್ ಮೂಲಕ ಶಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಬ್ಯಾಂಕ್ ಖಾತೆಗಳ ವಿವರ ಸಂಗ್ರಹಿಸಿರುವ ಸಿಸಿಬಿ ಪೊಲೀಸರು, ಹಣ ನೀಡಿರುವ ವಿದೇಶಿಯರು ಯಾರು ? ಅವರ ಉದ್ದೇಶವೇನು ? ಎಂಬುದನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿಸಿದ್ದಾರೆ.
‘ಶಂಕಿತ ಉಗ್ರರಾದ ಸೈಯದ್ ಸುಹೇಲ್ ಖಾನ್, ಜಾಹೀದ್ ತಬ್ರೇಜ್, ಸೈಯದ್ ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಹಾಗೂ ಮೊಹಮ್ಮದ್ ಉಮರ್ ಖಾತೆಗಳಿಗೆ ಹಣ ಬಂದಿರುವುದಕ್ಕೆ ಪುರಾವೆಗಳು ಸಿಕ್ಕಿವೆ’ ಎಂದು ಮೂಲಗಳು ಹೇಳಿವೆ.