ಮಾಜಿ ಮುಖ್ಯಮಂತ್ರಿಗಳಿಬ್ಬರ ಯುರೋಪ್ ಪ್ರವಾಸ – ರಾಜ್ಯ ರಾಜಕೀಯದಲ್ಲಿ ಕುತೂಹಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಏಕಕಾಲದಲ್ಲಿ ವಿದೇಶ ಪ್ರವಾಸದಲ್ಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬಿಜೆಪಿ – ಜೆಡಿಎಸ್‌ ಮೈತ್ರಿ ಚರ್ಚೆಯ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಯುರೋಪ್‌ ಪ್ರವಾಸದಲ್ಲಿರುವುದು ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.


ಇತ್ತೀಚೆಗೆ ಡಿ.ಕೆ ಶಿವಕುಮಾರ್‌, ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಗೆದ್ದವರು ಹಾಗೂ ಸೋತವರು ಸಿಂಗಾಪುರದಲ್ಲಿ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಬ್ಬರು ಮಾಜಿ ಸಿಎಂಗಳು ಯುರೋಪ್‌ ಪ್ರವಾಸದಲ್ಲಿರುವುದು ಕುತೂಹಲ ಮೂಡಿಸಿದೆ.

Also Read  ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!!

ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಅವರು ಕುಟುಂಬ ಸದಸ್ಯರೊಂದಿಗೆ ಗುರುವಾರ ವಿದೇಶ ಪ್ರವಾಸ ಕೈಗೊಂಡಿದ್ದು, ಆಗಸ್ಟ್‌ 5ಕ್ಕೆ ವಾಪಸಾಗಲಿದ್ದಾರೆ. ಇತ್ತ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರ ವಿದೇಶ ಪ್ರವಾಸದ ಬೆನ್ನಲ್ಲೇ ಯಡಿಯೂರಪ್ಪ ಕೂಡಾ ಯುರೋಪ್‌ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

error: Content is protected !!
Scroll to Top