ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಸದಾ ವಿವಾದದ ಟ್ವೀಟ್‌ ಮಾಡುತ್ತಲೇ ಇದ್ದು ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣದ ಆರೋಪ ಎದುರಿಸುತ್ತಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತುಮಕೂರು ಮೂಲದ ಶಕುಂತಲಾ, ಈ ಹಿಂದೆ ಕೂಡಾ ರೈಲ್ವೇ ದುರಂತಕ್ಕೆ ಸಂಬಂಧಪಟ್ಟಂತೆ ಟ್ವೀಟ್‌ ಮಾಡಿದ್ದು ಆಗ ಕೂಡ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದು, ಇದಕ್ಕೆ ಸಂಬಂಧಪಟ್ಟಂತೆ ಆಕೆಯನ್ನು ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆ ಪೋಲಿಸರು ಬಂಧಿಸಿದ್ದಾರೆ ಎನ್ನಲಾಗಿದೆ.

Also Read  ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ - ಚಾಲಕರ ಹುದ್ದೆಗೆ ನೇರ ಸಂದರ್ಶನ

error: Content is protected !!
Scroll to Top