ಸುಂಕದಕಟ್ಟೆ: ರಸ್ತೆ ಬದಿ ನಿಂತಿದ್ದ ಯುವಕನಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.31. ರಸ್ತೆ ಬದಿ ನಿಂತಿದ್ದ ಯುವಕನೋರ್ವನಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಗಾಯಾಳು ಯುವಕನನ್ನು ಸುಂಕದಕಟ್ಟೆ ಸಮೀಪದ ಮೂಜೂರು ನಿವಾಸಿ ಆಸಿಫ್ ಎಂದು ಗುರುತಿಸಲಾಗಿದೆ. ಈತ ಸುಂಕದಕಟ್ಟೆ ದರ್ಗಾ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದಾಗ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಯುವಕನಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿ ಹೊಡೆದ ನಂತರ ಚಾಲಕ ಬಸ್ಸನ್ನು ನಿಲ್ಲಿಸಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top