(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಂದಿನಿ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ.
ಹಾಲಿನ ಬೆಲೆಯನ್ನು ಲೀಟರ್ ಗೆ 5ರೂ ಏರಿಕೆ ಮಾಡಬೇಕು ಎಂಬುದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು ಎನ್ನಲಾಗಿದೆ.