(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಿವಾಸದ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು ಎನ್ನಲಾಗಿದೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನಾದ ಪ್ರಶಾಂತ್ ಸೇರಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 143 ಮತ್ತು 149 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಸಂಬಂಧ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
