ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ – ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ರಚನೆ ಮಾಡುವ ಬಗ್ಗೆ ಕಾನೂನು ತಜ್ಞರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಿದ್ದ ವೇಳೆ ಈ ಭರವಸೆ ನೀಡಿದ್ದಾರೆ.

Also Read  ನಿಗದಿತ ವೇಳಾಪಟ್ಟಿಯಂತೆಯೇ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಸಚಿವ ಸುರೇಶ್ ಕುಮಾರ್

error: Content is protected !!
Scroll to Top